¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
TSK
TSK · ವಿಮೋಚನಕಾಂಡ 5:6
Treasury of Scripture Knowledge references in ಕನ್ನಡ IRV.
ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು.
¶ ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
¶ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
¶ ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.
ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.