ವಿಮೋಚನಕಾಂಡ 2:2
TSK
ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.
TSK
Treasury of Scripture Knowledge references in ಕನ್ನಡ IRV.
ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.
ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.
¶ ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.