TSK

TSK · ವಿಮೋಚನಕಾಂಡ 6:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.

¶ ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.

ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು.

ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.