TSK

TSK · ವಿಮೋಚನಕಾಂಡ 6:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.

“ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.

ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.

ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.

¶ “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.

ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”

‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.