ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
TSK
TSK · ವಿಮೋಚನಕಾಂಡ 7:11
Treasury of Scripture Knowledge references in ಕನ್ನಡ IRV.
ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.
ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
¶ “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
¶ “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.
¶ ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
¶ ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.