¶ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
TSK
TSK · ವಿಮೋಚನಕಾಂಡ 7:13
Treasury of Scripture Knowledge references in ಕನ್ನಡ IRV.
¶ ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.
ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
¶ ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.
ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.