ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.
TSK
TSK · ವಿಮೋಚನಕಾಂಡ 7:23
Treasury of Scripture Knowledge references in ಕನ್ನಡ IRV.
ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.
ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.