TSK

TSK · ವಿಮೋಚನಕಾಂಡ 7:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.

ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.

¶ ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.

ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.

ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!

ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”

ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,