TSK

TSK · ವಿಮೋಚನಕಾಂಡ 8:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.

ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.

ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.

ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.

ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.