TSK

TSK · ವಿಮೋಚನಕಾಂಡ 8:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.

ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು.

ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.

ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.

ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.

¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”