ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.
TSK
TSK · ವಿಮೋಚನಕಾಂಡ 8:28
Treasury of Scripture Knowledge references in ಕನ್ನಡ IRV.
¶ ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.
ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು” ಎಂದನು.
ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.
ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.