ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.
TSK
TSK · ವಿಮೋಚನಕಾಂಡ 8:4
Treasury of Scripture Knowledge references in ಕನ್ನಡ IRV.
ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.
ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.