ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.
TSK
TSK · ವಿಮೋಚನಕಾಂಡ 9:14
Treasury of Scripture Knowledge references in ಕನ್ನಡ IRV.
¶ “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.
ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.
ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.
ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.