¶ ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.
TSK
TSK · ವಿಮೋಚನಕಾಂಡ 9:2
Treasury of Scripture Knowledge references in ಕನ್ನಡ IRV.
¶ ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
¶ “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.
ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.