TSK

TSK · ಯೆಹೆಜ್ಕೇಲನು 13:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.

ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.

ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.

“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.

ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.

ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.

ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.

ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.

‹ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›

ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.