¶ ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
TSK
TSK · ಯೆಹೆಜ್ಕೇಲನು 21:20
Treasury of Scripture Knowledge references in ಕನ್ನಡ IRV.
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
¶ ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”