TSK

TSK · ಯೆಹೆಜ್ಕೇಲನು 21:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.

ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.

ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.

ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.

¶ ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.

ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.

ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.

ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.

ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.

ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

¶ “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,

“ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!

¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.

ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”

ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.