ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
TSK
TSK · ಯೆಹೆಜ್ಕೇಲನು 21:31
Treasury of Scripture Knowledge references in ಕನ್ನಡ IRV.
ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
¶ “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
¶ ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.
ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.