TSK

TSK · ಯೆಹೆಜ್ಕೇಲನು 21:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.

¶ “‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.

ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›