TSK

TSK · ಯೆಹೆಜ್ಕೇಲನು 21:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.

ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.

ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.

ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.

¶ “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.

ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.’”

ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.

ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.