TSK

TSK · ಯೆಹೆಜ್ಕೇಲನು 30:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.

ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.

ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”

“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.

ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.

ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

¶ ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.