TSK

TSK · ಯೆಹೆಜ್ಕೇಲನು 30:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.

ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.

ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.

ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.

ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

¶ ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; ಆದರೆ, ಮಿಡತೆಯು ರೆಕ್ಕೆಗಳ ಪರೆಯನ್ನು ಹರಿದುಕೊಂಡು ಹಾರಿಹೋಗಿ ಬಿಡುವುದಷ್ಟೇ.