TSK

TSK · ಯೆಹೆಜ್ಕೇಲನು 33:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.

¶ ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,

¶ (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,