TSK

TSK · ಯೆಹೆಜ್ಕೇಲನು 39:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.

ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.

ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.

ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ

ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.

ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.