TSK

TSK · ಯೆಹೆಜ್ಕೇಲನು 39:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.

ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.

‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.

¶ ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”

ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.

ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.