TSK

TSK · ಎಜ್ರನು 2:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.

ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392.

ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.

ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.

¶ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.