ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.
TSK
TSK · ಎಜ್ರನು 3:13
Treasury of Scripture Knowledge references in ಕನ್ನಡ IRV.
1 ಅರಸುಗಳು 1:40
TSK
ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
ನೆಹೆಮಿಯ 12:43
TSK
ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.
ಕೀರ್ತನೆಗಳು 100:1
TSK
ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
ಜೆಕರ್ಯ 4:7
TSK
¶ ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.