TSK

TSK · ಎಜ್ರನು 3:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.

ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.

ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.

ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,

ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.

¶ “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”

ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.