TSK

TSK · ಎಜ್ರನು 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.

ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.

¶ ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.

ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.

ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.

ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.

ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.

ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.

ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.