ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
TSK
TSK · ಎಜ್ರನು 4:1
Treasury of Scripture Knowledge references in ಕನ್ನಡ IRV.
ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.
ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.
ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.
¶ ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?
ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.