TSK

TSK · ಎಜ್ರನು 4:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,

ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.

ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.

ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.

‹ಸಮಾರ್ಯದವರಾದ›‹ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.›

ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.