ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
TSK
TSK · ಎಜ್ರನು 6:22
Treasury of Scripture Knowledge references in ಕನ್ನಡ IRV.
ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.
¶ “ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.
ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.
ಅದಕ್ಕೆ ಯೇಸು, ‹“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”› ಎಂದು ಉತ್ತರ ಕೊಟ್ಟನು.