TSK

TSK · ಎಜ್ರನು 7:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.

ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.

ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.

ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.

ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.