TSK

TSK · ಎಜ್ರನು 9:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.

ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.

¶ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”

¶ ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?