ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.
TSK
TSK · ಎಜ್ರನು 9:8
Treasury of Scripture Knowledge references in ಕನ್ನಡ IRV.
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.
ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.
ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು
ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.
ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.
ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
¶ “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
¶ ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.
ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.
ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.