TSK

TSK · ಆದಿಕಾಂಡ 1:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.

ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.

ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,

ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

‹ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?›

‹ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.›

ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.