TSK

TSK · ಆದಿಕಾಂಡ 1:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,

¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.›

‹ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.›

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.