TSK

TSK · ಆದಿಕಾಂಡ 1:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.

ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.

ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,

ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ

ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು.

ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.

ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.

‹ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.›

ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.

ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.