TSK

TSK · ಆದಿಕಾಂಡ 10:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

¶ ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.

ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.

ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.