¶ ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.
TSK
TSK · ಆದಿಕಾಂಡ 10:2
Treasury of Scripture Knowledge references in ಕನ್ನಡ IRV.
ಯೆಹೆಜ್ಕೇಲನು 27:7
TSK
ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.
ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.
ಯೆಹೆಜ್ಕೇಲನು 38:2
TSK
“ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,
ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.
ಪ್ರಕಟನೆ 20:8
TSK
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.