¶ ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
TSK
TSK · ಆದಿಕಾಂಡ 10:22
Treasury of Scripture Knowledge references in ಕನ್ನಡ IRV.
ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.