TSK

TSK · ಆದಿಕಾಂಡ 10:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.

ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.

ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.

ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.