ಆದಿಕಾಂಡ 12:4
TSK
¶ ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
TSK
Treasury of Scripture Knowledge references in ಕನ್ನಡ IRV.
¶ ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
¶ ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.