TSK

TSK · ಆದಿಕಾಂಡ 11:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.

ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

“ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ,

ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.

¶ ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.

“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.

ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.

ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

¶ “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.