TSK

TSK · ಆದಿಕಾಂಡ 11:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.

ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.

¶ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.

¶ ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.

ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.

ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.