ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
TSK
TSK · ಆದಿಕಾಂಡ 12:15
Treasury of Scripture Knowledge references in ಕನ್ನಡ IRV.
ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,
¶ ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.
¶ ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು.
ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು.
ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.