ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
TSK
TSK · ಆದಿಕಾಂಡ 12:8
Treasury of Scripture Knowledge references in ಕನ್ನಡ IRV.
ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.
¶ ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.
¶ ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.
ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
¶ ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,
ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.
ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,
ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.
ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.