TSK

TSK · ಆದಿಕಾಂಡ 14:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.

ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.

ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.

ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.