TSK

TSK · ಆದಿಕಾಂಡ 14:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.

¶ ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.

ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.

ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”