TSK

TSK · ಆದಿಕಾಂಡ 14:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.

ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.